ಬೆಳ್ತಂಗಡಿ : ಧರ್ಮಸ್ಥಳ . ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದು. ಬೆಳಗ್ಗೆ 11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿ, ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ.
ಸತತ ಮೂರು ಭಾರಿ ಕೋರ್ಟ್ ನಲ್ಲಿ ಹೇಳಿಕೆ ಪಡೆದುಕೊಳ್ಳಲಾಗಿದ್ದು ಇಂದು ಮುಕ್ತಾಯವಾಗಿದೆ. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.