ಧರ್ಮಸ್ಥಳ ಪ್ರಕರಣ, ಸರ್ಕಾರಕ್ಕೆ ವರದಿ ನೀಡಲಿರುವ ಎಸ್ಐಟಿ: ಬೆಳಗಾವಿ ಅಧಿವೇಶನದಲ್ಲಿ ಮಾಹಿತಿ,ಗೃಹ ಸಚಿವ ಪರಮೇಶ್ವರ್:

 

 

 

 

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್​ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕೋರ್ಟ್​​ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. ಸರ್ಕಾರಕ್ಕೂ ಅವರು ವರದಿ ಕೊಡುತ್ತಾರೆ. ಸರ್ಕಾರವೇ ಎಸ್‌ಐಟಿ ರಚಿಸಿರುವುದಲ್ವಾ? ನಮಗೂ ಅವರು ವರದಿ ನೀಡುತ್ತಾರೆ. ವರದಿ ಬಂದ ಬಳಿಕ ಏನಿದೆ ಎಂದು ತಿಳಿಯಲಿದೆ. ಏನು ಷಡ್ಯಂತ್ರ ನಡೆದಿದೆ, ಯಾರೆಲ್ಲಾ ಕಾರಣ ಎಂಬುದು ಗೊತ್ತಾಗುತ್ತದೆ ಎಂದರು.

error: Content is protected !!