ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ, ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ:

 

 

 

ಬೆಂಗಳೂರು: ಸಣ್ಣ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. ಎಂಬವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

ಅಲ್ಲದೆ, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಜಾರಿಗೆ ಬಂದಿಲ್ಲ. ಹೀಗಾಗಿ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿದೆ.

error: Content is protected !!