
ಉಡುಪಿ:ಕೃಷ್ಣ ನಗರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃಷ್ಣಮಠದ ವತಿಯಿಂದ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀ ಕೃಷ್ಣನ ದರ್ಶನ ಪಡೆದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಿದರು. ಬಳಿಕ ಅವರು ಲಕ್ಷ ಕಂಠ ಗೀತಾ ಪಠಣ ಸಮಾವೇಶದಲ್ಲಿ ಭಾಗವಹಿಸಿದರು.