ರಾಜಕೀಯ ಶಾಶ್ವತವಲ್ಲ ,ಏನು ಆಗುತ್ತೊ ಆಗಲಿ ತಲೆಕೆಡಿಸಿಕೊಳ್ಳಲ್ಲ: ಕುತೂಹಲ ಕೆರಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತು:

 

 

 

ಬೆಂಗಳೂರು: ರಾಜಕೀಯ ಶಾಶ್ವತ ಅಲ್ಲ. ಏನು ಆಗುತ್ತೋ ಆಗಲಿ ತಲೆಕೆಡಿಸಿಕೊಳ್ಳೊಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಕೆಂಗಲ್ ಗೇಟ್ ಬಳಿಯ ಪ್ರವೇಶ ದ್ವಾರದ ಬಳಿ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆ ಅನೌಪಚಾರಿಕವಾಗಿ ಮಾತನಾಡುತ್ತಾ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ವಿಧಾನಸೌಧ ಕೆಂಗಲ್ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆಗಿನ ಈ ಅನೌಪಚಾರಿಕ ರಾಜಕೀಯ ಮಾತು ಸಾಕಷ್ಟು ಕುತೂಹಲ ಕೆರಳಿಸಿತು.‌ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಉದಯ ಕದಲೂರು ಜೊತೆ ವಿಧಾನಸೌಧದಿಂದ ತೆರಳುವ ವೇಳೆ ಲೋಕಾಭಿರಾಮವಾಗಿ ಮಾತನಾಡುತ್ತಾ ಪ್ರಸಕ್ತ ರಾಜಕೀಯ ವಿದ್ಯಮಾನದ ಬಗ್ಗೆ ಮಾತನಾಡಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ.

ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ. ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ. ಏನ್​ ಆಗುತ್ತೋ ಆಗಲಿ. ಯಾವತ್ತೂ ಯೋಚನೆ ಮಾಡಿ ಗೊತ್ತೇ ಇಲ್ಲ ನಂಗೆ. ಏನ್​ ಆಗುತ್ತೋ ಆಗಲಿ. ರಾಜಕೀಯ ನಮ್ಮಪ್ಪನ ಆಸ್ತಿನಾ? ಏನು ಆಗುತ್ತೋ ಆಗಲಿ. ರಾಜಕೀಯ ಶಾಶ್ವತ ಅಲ್ಲ ಎಂದು ವೈರಾಗ್ಯದ ರೀತಿಯಲ್ಲಿ ಮಾತನಾಡಿದರು.

ಸದಾಶಿವನಗರ ಡಿಕೆಶಿ ಮನೆಯಲ್ಲಿ ಉಪಹಾರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಈ ರಾಜಕೀಯ ಮಾತು ಸಾಕಷ್ಟು ಕುತೂಹಲ ಕೆರಳಿಸಿದೆ. ಅಧಿಕಾರ ಹಂಚಿಕೆ ಚರ್ಚೆ, ಪವರ್ ಫೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ ಅನೌಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನದ ಹಿನ್ನೆಲೆ ಈ ರೀತಿ ಶಾಸಕರ ಜೊತೆ ಸಂಭಾಷಣೆ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

error: Content is protected !!