
ಬೆಳ್ತಂಗಡಿ: ಸಂಘ ಸಂಸ್ಥೆಗಳ ಒಕ್ಕೂಟ ಬಳಂಜ ಗ್ರಾಮವಾಗಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿ ಇದಕ್ಕೆ ಸಾಕ್ಷಿ ಇಲ್ಲಿ ನಡೆದ ಯುವಜನ ಮೇಳ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಡಿ 13ರಂದು ಬಳಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿಭಾಗದ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳಿಗೂ ಆಂಗ್ಲ ಮಾಧ್ಯಮದ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ಕಾರ್ಯ ಶ್ಲಾಘನೀಯ.ಬಳಂಜ ಹಲವಾರು ಸಾಧಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಏಕೈಕ ಊರು. ಶಾಲೆ ಮತ್ತು ದೇವಸ್ಥಾನದ ಬಗ್ಗೆ ಇಲ್ಲಿನ ಬಂಧುಗಳಿಗೆ ಅಪಾರ ಗೌರವ ಮತ್ತು ಪ್ರೀತಿ,ಕಾಳಜಿಯಿದೆ.ಅದಕ್ಕೆ ಇಂದು ಆಯೋಜಿಸಿದ ಅಮೃತ ಮಹೋತ್ಸವ ಕಾರ್ಯಕ್ರಮವೇ ಸಾಕ್ಷಿ ಎಂದ ಅವರು ಸಂಸ್ಥೆಯ ಶಿಕ್ಷಣ ಪ್ರೇಮಿಯಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಕಾರ್ಯಕ್ರಮ ಉದ್ಘಾಟಿಸಿ, ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇನ್ನಷ್ಟು ಅಭಿವೃದ್ಧಿ ಹೊಂದುವುದರೊಂದಿಗೆ ಶಾಲೆಯು ಗತವೈಭವವನ್ನು ಕಾಣಲಿ ಎಂದು ಶುಭ ಹಾರೈಸಿದರು.
ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಮಾತನಾಡಿ ಶಾಲೆ ಮತ್ತು ದೇವಸ್ಥಾನ ನಮಗೆ ಸಂಸ್ಕಾರ ಕೊಡುವ ಪುಣ್ಯ ಕ್ಷೇತ್ರಗಳು. ಇಲ್ಲಿ ಯಾವುದೇ ರಾಜಕೀಯ ಮಾಡದೇ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ ಪ್ರಾಮಾಣಿಕತೆ ಮತ್ತು ಬದ್ದತೆಯಿಂದ ಕೆಲಸ ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ.ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಮೂಲಕ ಬೆಳಕು ಯೋಜನೆಯಡಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,ಉಪನಿರ್ದೇಶಕ ಜಿಎಸ್ ಶಶಿಧರ್,ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಅಳದಂಗಡಿ ಪ್ರಸಿದ್ದ ವೈದ್ಯ ಡಾ.ಎಮ್.ಎಂ ತುಳಪುಳೆ,ಬಳಂಜ ಪ್ರೌಢಶಾಲಾ ಉಪಾಧ್ಯಕ್ಷ ಕೆ.ವಸಂತ ಸಾಲಿಯಾನ್,ಹಿರಿಯರಾದ ಯುವರಾಜ್ ಪಡಿವಾಳ್ ಬಳಂಜ ಹೊಸಮನೆ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಬಳಂಜ ಶಿಕ್ಷಣ ಟ್ರಸ್ಟ್ ಅದ್ಯಕ್ಷ ಮನೋಹರ್ ಬಳಂಜ,ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಸುರೇಶ್ ಶೆಟ್ಟಿ ಕುರೆಲ್ಯ,ಬಳಂಜ ಗ್ರಾ.ಪಂ ಸದಸ್ಯರಾದ ಸುಚಿತ್ರಾ,ಯಕ್ಷಿತಾ ದೇವಾಡಿಗ,
ಎಸ್‌ಡಿಎಂಸಿ ಅಧ್ಯಕ್ಷ ರತ್ನಾಕರ ಪೂಜಾರಿ,ಶಾಲಾ ಮುಖ್ಯೋಪಾಧ್ಯಯರಾದ ರಂಗಸ್ವಾಮಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ವೈ,ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಮೃತ ಮಹೋತ್ಸವ ಸಮಿತಿ ಪ್ರಧಾನ ಸಂಚಾಲಕ ಅಶ್ವಥ್ ಹೆಗ್ಡೆ ಸ್ವಾಗತಿಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ ಪ್ರಸ್ತಾವಿಕ ಮಾತುಗಳನ್ನಾಡಿದರು.,ಪ್ರೌಢಶಾಲಾ ಮುಖ್ಯೋಪಾಧ್ಯಯರಾದ ಸುಲೋಚನಾ ವಂದಿಸಿದರು.
ಅಮೃತ ಮಹೋತ್ಸವದಲ್ಲಿ ಬಳಂಜ ಪೇಟೆಯಿಂದ ವಿದ್ಯಾರ್ಥಿಗಳು ಹಾಗೂ ಊರವರಿಂದ ವೈಭವದ ಪಥಸಂಚಲನ ನಡೆಯಿತು.