ಪುತ್ರಬೈಲು ಬಳಿ ಬೈಕ್ ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ:

 

 

 

ಬೆಳ್ತಂಗಡಿ: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಲಾಯಿಲ ಗ್ರಾಮದ ಪುತ್ರಬೈಲು ಬಳಿ ನಡೆದಿದೆ.

ಕಿಲ್ಲೂರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತಿದ್ದ ಬೈಕ್ ಬೆಳ್ತಂಗಡಿ ಯಿಂದ ಶಾಮಿಯಾನ ಹೇರಿಕೊಂಡು ಬರುತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಗಾಯಗೊಂಡವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು. ಬೈಕ್ ಸವಾರರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

error: Content is protected !!