ಬೆಳ್ತಂಗಡಿ, ಸರಕಾರಿ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ₹1.715 ಕೋಟಿ ಮಂಜೂರು: ಮನವಿಗೆ ಸ್ಪಂದಿಸಿದ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಶಾಸಕ ಹರೀಶ್ ಪೂಂಜ:

 

 

 

ಬೆಳ್ತಂಗಡಿ: ತಾಲೂಕಿನ‌ಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50 ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದು, ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಹಾಗೂ ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ಶಾಸಕ ಹರೀಶ್ ಪೂಂಜ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

error: Content is protected !!