
ಬೆಳ್ತಂಗಡಿ: ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿ.19 ಹಾಗೂ 20ರಂದು ಶಾಲೆಯ ಬಯಲು ರಂಗಮಂದಿರದಲ್ಲಿ ನಡೆಯಲಿದೆ ಎಂದು ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದರು.
ಅವರು ಶಾಲೆಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಡಿ 19ರಂದು ಬೆಳಿಗ್ಗೆ 11 ಗಂಟೆಗೆ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಅಧ್ಯಕ್ಷತೆ ವಹಿಸಲಿದ್ದು, ಉಜಿರೆ ಗ್ರಾಪಂ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಬಿಇಒ ತಾರಾ ಕೇಸರಿ ಬಾಗಲಕೋಟೆ ವಿಶ್ವವಿದ್ಯಾನಿಲಯದ ಕುಲ ಸಚಿವ ಡಾ.ಔದ್ರಾಮ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶೇಕ್ ಲತೀಫ್ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಯಕ್ಷಗಾನ ಕಾರ್ಯಕ್ರಮ ಜರಗಲಿದೆ.
ಡಿ. 20ರಂದು ಸಂಜೆ 4:30ಕ್ಕೆ ಸಭಾ ಕಾರ್ಯಕ್ರಮ ಜರಗಲಿದ್ದು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ ಯ.ವೀರೇಂದ್ರ ಹೆಗ್ಗಡೆ ದೀಪ ಪ್ರಜ್ವಲನಗೊಳಿಸಿ ಶುಭಾಶೀರ್ವಾದ ನೀಡುವರು.
ಸ್ಪೀಕರ್ ಯು.ಟಿ. ಖಾದರ್ ಫರೀದ್, ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನವೀಕೃತ ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸುವರು.
ಸಂಸದ ಕ್ಯಾ.ಬ್ರಿಜೇಶ್ ಚೌಟ,ಎಂಎಲ್ ಸಿಗಳಾದ ಎಸ್.ಎಲ್. ಭೋಜೇಗೌಡ, ಐವನ್ ಡಿಸೋಜ, ಕೆ.ಪ್ರತಾಪ ಸಿಂಹ ನಾಯಕ್, ಮಂಜುನಾಥ ಭಂಡಾರಿ,ಡಾ.ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬಿ.ಆರ್, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಉಜಿರೆ ಗ್ರಾಪಂ ಅಧ್ಯಕ್ಷೆ ಉಷಾಕಿರಣ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು ಹಾಗೂ ಸದಸ್ಯರು ಉಪಸ್ಥಿತರಿರುವರು.
ಸಂಜೆ 6 ಗಂಟೆಯಿಂದ ಸಂಗೀತ ಕಾರ್ಯಕ್ರಮ, ಸಾಂಸ್ಕೃತಿಕ ವೈವಿಧ್ಯ, ಎಸ್ ಡಿಎಂ ಕಲಾವೈಭವ, ಹಾಗೂ ತುಳು ಭಕ್ತಿ ಪ್ರಧಾನ ಹಾಸ್ಯ ನಾಟಕ ಜರಗಲಿದೆ.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಶಾಲಾ ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಅಬೂಬಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕ ಬಿ. ಸೋಮಶೇಖರ ಶೆಟ್ಟಿ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕರ್ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ. ಉಪಸ್ಥಿತರಿದ್ದರು.
1925ರಲ್ಲಿ ಮಲೆನಾಡು ಪ್ರದೇಶವಾದ ಪಡುವೆಟ್ಟು ಮನೆತನದ ಕೀರ್ತಿಶೇಷ ಕೃಷ್ಣ ಪಡುವೆಟ್ನಾಯ ಊರಿನ ಜನರ ಶಿಕ್ಷಣದ ಅವಶ್ಯಕತೆಯನ್ನು ಮನಗಂಡು ತಮ್ಮ ಸ್ವಂತ ಸ್ಥಳ ಹಾಗೂ ಸ್ವಂತ ಕಟ್ಟಡದಲ್ಲಿ ಈ ಶಾಲೆಯನ್ನು ಸ್ಥಾಪಿಸಿ ಶ್ರೀ ಜನಾರ್ದನ ಸ್ವಾಮಿ ಎಲಿಮೆಂಟರಿ ಶಾಲೆ ಎಂದು ನಾಮಕರಣ ಮಾಡಿದರು. 1955ರಲ್ಲಿ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪಟ್ಟಾಭಿಷೇಕ ಆದ ವರ್ಷವೇ ಈ ಶಾಲೆಯ ಆಡಳಿತವು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಸ್ತಾಂತರಿಸಲ್ಪಟ್ಟಿತು. 1956 ರಲ್ಲಿ ಹೊಸ ಕಟ್ಟಡಗಳ ನಿರ್ಮಾಣವಾಯಿತು. 1985ರಿಂದ ಈ ಶಾಲೆಯು ಎಸ್ ಡಿಎಂ ಶಿಕ್ಷಣ ಸಂಸ್ಥೆ ಆಡಳಿತಕ್ಕೆ ಒಳಪಟ್ಟಿದೆ.
ಒಂದರಿಂದ ಏಳನೇ ತರಗತಿವರೆಗಿನ ಈ ಶಾಲೆಯಲ್ಲಿ ಪ್ರಸ್ತುತ 379 ವಿದ್ಯಾರ್ಥಿಗಳು ಹಾಗೂ ಓರ್ವ ಸರಕಾರಿ ಶಿಕ್ಷಕ ಸೇರಿದಂತೆ ಒಟ್ಟು 13 ಶಿಕ್ಷಕರಿದ್ದಾರೆ.