ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ : ನಾಡ ಕಛೇರಿ, ವಸತಿ ,ಟವರ್, ಸೇರಿದಂತೆ  ವಿವಿಧ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ: 

 

 

ಮಡಂತ್ಯಾರ್: ಜನರ ಬಳಿಗೆ ತಾಲೂಕು ಆಡಳಿತ ಎಂಬ ಶಾಸಕ ಹರೀಶ್ ಪೂಂಜರ ಪರಿಕಲ್ಪನೆಯ 25 ನೇ ಜನಸ್ಪಂದನ ಸಭೆ
ಮಚ್ಚಿನ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 20 ರಂದು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಮಟ್ಟಕ್ಕೆ ಆಗಮಿಸಿ ಜನಸಾಮಾನ್ಯರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವ ಪ್ರಾಮಾಣಿಕ ಪ್ರಯತ್ನವನ್ನು ಜನಸ್ಪಂದನ ಮೂಲಕ ನಡೆಸಲಾಗುವುದು ಎಂದರು.

ಓಡಿಲ್ನಾಳ ಮತ್ತು ಮಚ್ಚಿನ ಗಡಿ ಗ್ರಾಮದಲ್ಲಿ ಬಿಎಸ್ ಎನ್ ಎಲ್ ಟವರ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಆದರೆ ಆ ಸ್ಥಳಕ್ಕೆ ಅರಣ್ಯ ಇಲಾಖೆಯ ಆಕ್ಷೇಪ ಇದೆ ಎಂದು ಗ್ರಾಮಸ್ಥರು ಹೇಳಿದರು. ಸದ್ರಿ ಸ್ಥಳದ ಕುರಿತು ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಬರಬೇಕು ಎಂದು ಆರ್ ಎಫ್ ಓ ಮಾಹಿತಿ ನೀಡಿದರು.

ಗ್ರಾಮದ ಮಾಣೂರು ಪ್ರದೇಶದ ರಸ್ತೆಯನ್ನು ದುರಸ್ತಿಗೊಳಿಸಿ ಬೇಕು ಎಂದು ನಾಗರೀಕರು ಹೇಳಿದರು. ಕಳೆದ ಅವಧಿಯಲ್ಲಿ ಮಚ್ಚಿನ ಗ್ರಾಮ ವ್ಯಾಪ್ತಿಯಲ್ಲಿ 26 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಆದರೆ ಪ್ರಸ್ತುತ ಸರ್ಕಾರದ ಅನುದಾನ ನೀಡದಿರುವುದಿಂದ ಅಭಿವೃದ್ಧಿಗೆ ಸಮಸ್ಯೆಯಾಗುತ್ತಿದೆ.
ಮಾಣೂರು ರಸ್ತೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಬಂಗೇರಕಟ್ಟ – ನೆತ್ತರ ರಸ್ತೆ ದುರಸ್ತಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು ಕಾಮಗಾರಿಗೆ ಅನುಮೋದನೆ ದೊರೆಯಬೇಕಾಗಿದೆ ಎಂದು ಶಾಸಕರು ತಿಳಿಸಿದರು.

ಕಳೆದ 9 ವರ್ಷಗಳ ಹಿಂದೆ ಮನೆ ನಿರ್ಮಾಣಕ್ಕೆ ನಿವೇಶನ ಹಂಚಿಕೆ ಮಾಡಿದೆ ಆದರೆ ಮನೆ ನಿರ್ಮಾಣಕ್ಕೆ ಸಮರ್ಪಕ ಸ್ಥಳ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದರು. ನಿವೇಶನ ಸಮಸ್ಯೆ ಕುರಿತು ತಹಶೀಲ್ದಾರ್ ಮತ್ತು ಇಓ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಶಾಸಕರು ಸೂಚಿಸಿದರು.

ಒಡಿಲ್ನಾಳ ಕುವೆಟ್ಟು ಗ್ರಾಮದ ಗಡಿಭಾಗದಲ್ಲಿ ಜೆಜೆಎಂ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಶಾಸಕರು ಸ್ಥಳ ಪರಿಶೀಲನೆ ನಡೆಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಮಚ್ಚಿನದಲ್ಲಿ ನಾಡ ಕಚೇರಿ ಆಗಲಿ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಹೇಳಿದರು.
ಕಣಿಯೂರು ಹೋಬಳಿ ರಚನೆ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಎಲ್ಲರಿಗೂ ಅನುಕೂಲವಾಗಲಿ ಎಂದು ಸೂಕ್ತ ಸ್ಥಳವನ್ನು ಆಯ್ದು ನಾಡ ಕಚೇರಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಶುದ್ಧ ಕುಡಿಯುವ ನೀರು ಘಟಕ ತುಕ್ಕು ಹಿಡಿದಿದೆ ಎಂದು ಗ್ರಾಮಸ್ಥರು ಹೇಳಿದಾಗ ಗ್ರಾಮ ಪಂಚಾಯತ್ ಇದನ್ನು ಹಸ್ತಾಂತರ ತೆಗೆದುಕೊಳ್ಳುವ ಕಾರ್ಯ ಮಾಡಿ ಎಂದು ಶಾಸಕರು ತಿಳಿಸಿದರು. ಚಿರತೆ ಕಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು.

ಗ್ರಾ.ಪಂ.ಅಧ್ಯಕ್ಷೆ , ಉಪಾಧ್ಯಕ್ಷೆ ಸೋಮವಾತಿ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್
ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಸದಸ್ಯರು ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!