
ಬೆಳ್ತಂಗಡಿ:ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ₹1 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿದೆ.
ಶಾಸಕ ಹರೀಶ್ ಪೂಂಜ ಅಭಿನಂದನೆ:
ಅನುದಾನ ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ *ರೂ. 1 ಕೋಟಿ* ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದಾರೆ.