
ಬೆಳ್ತಂಗಡಿ : ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ.