
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆ ಜ. 5 ರಂದು ಜೈನ್ ಪೇಟೆ ಕಿನ್ಮಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿಗಳಾದ ಪ್ರೇಮನಾಥ್, ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕರ್ತರು ಭಾಗವಹಿಸಿದ್ದರು.
ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಇತ್ತೀಚೆಗೆ ಅಗಲಿದ ವಿನಯ್ ಹೆಗ್ಡೆಯವರ ಬಗ್ಗೆ ಮಾತನಾಡಿದರು. ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲಾಯಿತು. ನಿವೃತ್ತ ಸರ್ಕಾರಿ ಉದ್ಯೋಗಿಗಳಾದ ಪ್ರಸನ್ನ ಕುಮಾರ್ ಹಾಗೂ ಪದ್ಮ ಕುಮಾರ್ ಅವರನ್ನು ಪಕ್ಷದ ಧ್ವಜ ನೀಡಿ ಸೇರ್ಪಡೆಗೊಳಿಸಲಾಯಿತು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿ, ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ನಿರೂಪಿಸಿದರು.