ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಪಠಣ, ಧನು ಪೂಜೆ: ಉದ್ಯಮಿ ಶಶಿಧರ್ ಶೆಟ್ಟಿ ಭಾಗಿ,ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಹಕಾರ:

 

 

ಬೆಳ್ತಂಗಡಿ:ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ವಿಷ್ಣು ಸಹಸ್ರನಾಮ ಪಠಣ ಹಾಗೂ ಧನು ಪೂಜೆಯಲ್ಲಿ ಉದ್ಯಮಿಗಳು, ಕೊಡುಗೈದಾನಿ, ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ,ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ  ಭಾಗವಹಿಸಿ ದೀಪ ಬೆಳಗಿಸಿ ಚಾಲನೆ ನೀಡಿದರು.

 

 

 

ನಂತರ ಜ 29 ರಂದು ದೇವಸ್ಥಾನದಲ್ಲಿ ನಡೆಯಲಿರುವ ವಿಷ್ಣುಸಹಸ್ರನಾಮ ದಶಮಾನೋತ್ಸವ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ನಡೆಸುವ ಬಗ್ಗೆ ಪ್ರಮುಖರೊಂದಿಗೆ ಸಮಲೋಚನ ಸಭೆ ನಡೆಸಿ ಮಾರ್ಗದರ್ಶನ ನೀಡಿದರಲ್ಲದೇ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಡಾ. ಪ್ರದೀಪ್ ನಾವೂರು ಹಾಗೂ ಟ್ರಸ್ಟ್ ಪದಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ದೇವಸ್ಥಾನದಲ್ಲಿ ಅಚ್ಚುಕಟ್ಟಾಗಿ  ಧನುರ್ಮಾಸದಲ್ಲಿ ನಡೆಯುವ ಪೂಜೆ ಹಾಗೂ ವಿಷ್ಣು ಸಹಸ್ರನಾಮ ಪಠಣ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಊರವರು, ಭಕ್ತಾಧಿಗಳು ಉಪಸ್ಥಿತರಿದ್ದರು.

 

ಇದನ್ನೂ ಓದಿ:

 

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ :

 

error: Content is protected !!