ಬೆಳ್ತಂಗಡಿ, ವಿವಿಧೆಡೆ ಕಾಲುಸಂಕ ರಚನೆಗೆ ₹1 ಕೋಟಿ ಅನುದಾನ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಶಾಸಕ ಹರೀಶ್ ಪೂಂಜ:

 

 

 

ಬೆಳ್ತಂಗಡಿ: ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ, ಸರಕಾರದಿಂದ ಈ ಬಾರಿಗೆ ತಲಾ ರೂ.25.00 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿದೆ.

ಅನುಮೋದನೆಗೊಂಡ ಕಾಮಗಾರಿಗಳ ವಿವರ:

1. ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ.

2. ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ.

3. ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ.

4. ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ.

ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

error: Content is protected !!