ಮೇಲಂತಬೆಟ್ಟು , ಚಿರತೆ ಓಡಾಟ, ಅರಣ್ಯಾಧಿಕಾರಿಗಳಿಂದ ಪರಿಶೀಲನೆ:

 

 

 

ಬೆಳ್ತಂಗಡಿ:ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು, ಇಂದು ಸಂಜೆ ಮೂಡಲ ಎಂಬಲ್ಲಿ ಚಿರತೆ ಓಡಾಟದ ಬಗ್ಗೆ ಪಂಚಾಯತ್ ಸದಸ್ಯ ಚಂದ್ರರಾಜ್ ಇವರಿಗೆ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ತಕ್ಷಣ ಸ್ಪಂದಿಸಿದ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಿದ ವೇಳೆ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!