
ಬೆಳ್ತಂಗಡಿ: ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಗೇರುಕಟ್ಟೆ ಬಳಿಯ ಸಂಬೋಳ್ಯ ದ ಬಾಲಕ ಸುಮಂತ್ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಮಾತುಕತೆ ನಡೆಸಿದರಲ್ಲದೇ ಸೂಕ್ತ ರೀತಿಯಲ್ಲಿ ತನಿಖೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಬಾಲಕ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದೊಂದು ಕೊಲೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ನಡೆದು ಹದಿನೈದು ದಿನಗಳು ಕಳೆದರೂ ಯಾವುದೇ ರೀತಿಯ ಸುಳಿವು ಸಿಗದೇ ಇರುವುದರಿಂದ ಪೋಷಕರು,ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಅದ್ದರಿಂದ ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಸಚಿವರಲ್ಲಿ ಮನವಿ ಮಾಡಿದರು.