ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ : ಜಿಲ್ಲಾಧಿಕಾರಿಗಳಿಗೆ RDPR ಕಾರ್ಯದರ್ಶಿ ಸೂಚನೆ:

ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯ್ತಿಗಳಿಗೆ 2025ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿತ್ತು. ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ.‌ ಆದುದರಿಂದ ನಿಗದಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗ ಕೋರಿದೆ ಎಂದು ತಿಳಿಸಿದೆ.

ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯ್ತಿಗಳಿಗೆ 2025ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿತ್ತು. ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ.‌ ಆದುದರಿಂದ ನಿಗದಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗ ಕೋರಿದೆ ಎಂದು ತಿಳಿಸಿದೆ.

ಪ್ರಸ್ತುತ ಬಹುತೇಕ ಗ್ರಾಮ ಪಂಚಾಯ್ತಿಗಳ ಅವಧಿಯು ಜನವರಿ-2026 ತಿಂಗಳನಿಂದ ಮಾರ್ಚ್‌-2026 ತಿಂಗಳವರೆಗೆ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿ ಗ್ರಾಮ ಪಂಚಾಯಿತಿಗಳಿಗೆ 2026-31ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ

ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

error: Content is protected !!