
ಬೆಳ್ತಂಗಡಿ: ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟರು. ಅವರು ಜ 31 ರಂದು ಬೆಳ್ತಂಗಡಿ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜವನ್ನು ತಿದ್ದುವ ಕೆಲಸ ಪತ್ರಕರ್ತರಿಂದ ಮಾತ್ರ ಸಾಧ್ಯ ಅದ್ದರಿಂದ ಸುಳ್ಳನ್ಬು ವೈಭವೀಕರಿಸದೇ ಸತ್ಯ ನಿಷ್ಪಕ್ಷಪಾತವಾಗಿ ವಸ್ತುನಿಷ್ಠ ವರದಿಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಧ್ಯಮದವರು ಮಾಡಬೇಕು, ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರು ಅಭಿನಂದನಾರ್ಹರು ಎಂದರು. ಈಗಾಗಲೇ ಬೆಳ್ತಂಗಡಿಯಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಸಮಸ್ಯೆಯಿಂದ ಸ್ವಂತ ಕಟ್ಟಡ ನಿರ್ಮಿಸಲು ಸಾಧ್ಯವಾಗಿಲ್ಲ . ಮುಂದಿನ ದಿನಗಳಲ್ಲಿ ಪತ್ರಕರ್ತರ ಸಂಘಕ್ಜೆ ಸ್ವಂತ ಕಟ್ಟಡ ನಿರ್ಮಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದ ಶಾಸಕರು ರೂ 20 ಲಕ್ಷದ ಭರವಸೆಯನ್ನು ನೀಡಿದರು. ಅದಲ್ಲದೇ ಉಚಿತ ವಿಮಾ ಯೋಜನೆ ಮಾಡಲು ಅರ್ಥಿಕ ಸಹಕಾರ ನೀಡುವುದಾಗಿಯೂ ಈ ವೇಳೆ ತಿಳಿಸಿದರು.ರಾಜ್ಯ ಸಂಘದ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಾರ್ಯಚಟುವಟಿಕೆ ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ
ಜಿಲ್ಲಾ ಸಂಘದ ಅಧ್ಯಕ್ಷ ಪುಷ್ಪರಾಜ್ ಮಾತನಾಡಿ ಪತ್ರಕರ್ತರು ದಿನಂಪ್ರತಿ ಬಹಳ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಅವರ ಆರೋಗ್ಯದ ಕಾಳಜಿಗಾಗಿ ತಿಂಗಳಿಗೊಮ್ಮೆ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರಗಳನ್ನು ತಾಲೂಕು ಮಟ್ಟದಲ್ಲಿ ಆಯೋಜನೆ ಮಾಡಲು ಚಿಂತನೆ ನಡೆಸಲಾಗುವುದು ಎಂದರು. ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ವರದಿಗಳನ್ನು ಮಾಡುವುದಲ್ಲದೆ ಒಂದಷ್ಟು ಸಂಘ ಸಂಸ್ಥೆಗಳ ಜೊತೆ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿಯೂ ಬೆಳ್ತಂಗಡಿ ಪತ್ರಕರ್ತರ ಸಂಘ ಕೈಜೋಡಿಸಿ ರಾಜ್ಯದಲ್ಲೇ ಮಾದರಿ ಸಂಘ ಎಂಬ ಹೆಗ್ಗಳಿಕೆ ಪಾತ್ರವಾಗಿದೆ ಎಂದರು.ನೂತನ ಅಧ್ಯಕ್ಷ ತುಕಾರಾಮ ಅವರು ಮುಂದಿನ ಮೂರು ವರ್ಷಗಳ ಅಧ್ಯಕ್ಷ ಅವಧಿಯಲ್ಲಿ ಎಲ್ಲರು ಸಹಕಾರ ನೀಡಿ ಪ್ರೋತ್ಸಾಹ ನೀಡಬೇಕೆಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ರಾಜೇಶ್ ಪೂಜಾರಿ, ಸಿದ್ದಿಕ್ ನೀರಾಜೆ, ಜಿಲ್ಲಾ ಸಂಘದ ಭುವನೇಶ್ ಗೇರುಕಟ್ಟೆ, ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಬಿ.ಎಸ್. ಕುಲಾಲ್ ಪ್ರಸ್ತಾವಿಸಿ ಸ್ವಾಗತಿಸಿದರು. ವರದಿಗಾರ ಸಂತೋಷ್ ಪಿ ಕೊಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮನೋಹರ್ ಬಳೆಂಜ ಧನ್ಯವಾದವಿತ್ತರು.