
ಬೆಳ್ತಂಗಡಿ: ಅತ್ಯಂತ ಪುರಾತನ ಇತಿಹಾಸವಿರುವ ಇಳಂತಿಲ ಸಮೀಪದ ಉರುವಾಲು ಗ್ರಾಮದ ವನಶಾಸ್ತಾರ ಮತ್ತು ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ಫೆ.20ರಿಂದ 22ರ ವರೆಗೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಫೆ.17 ರಂದು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ವೇಣೂರು ವೇದಮೂರ್ತಿ ಶ್ರೀ ಕೆ.ಲಕ್ಷ್ಮೀನಾರಾಯಣ ಕಾರಂತ ಇವರ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು
ಫೆ.20 ರಂದು ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ ನಡೆಯಲಿದೆ. ಹಾಗೂ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ 4.30 ರಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.
ರಾತ್ರಿ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಅತುಲ್ ಕುಮಾರ್ ಕೆ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಭಾಗವಹಿಸುವರು
ರಾತ್ರಿ 9 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಫೆ.21 ರಂದು ಬೆಳಿಗ್ಗೆ 8 ರಿಂದ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಶಶಿಧರ ಶೆಟ್ಟಿ ಬರೋಡ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.
ಫೆ.22 ರಂದು ಬೆಳಿಗ್ಗೆ 8 ರಿಂದ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಸದ ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ ಎಲ್ ಸಿಪ್ರತಾಪ್ ಸಿಂಹ ನಾಯಕ್, ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ಕಡ್ತಿಲ, ಕಾರ್ಯಾಧ್ಯಕ್ಷ ಸುನಿಲ್ ಅಣವು, ಟ್ರಸ್ಟ್ ಸಮಿತಿಯ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಕಲ್ಲಳಿಕೆ, ಹೊರೆಕಾಣಿಕೆ ಸಮಿತಿಯ ಸಂಚಾಲಕ ಪ್ರಭಾಕರ ಪೊಸಂದೋಡಿ ಉಪಸ್ಥಿತರಿದ್ದರು.