
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಬೆಳ್ತಂಗಡಿ ಪ್ರೆಸ್ ಕ್ಲಬ್ ಟ್ರಸ್ಟ್ ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿಬಿ ಧರ್ಮಸ್ಥಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ಪತ್ರಕರ್ತರ ಸಂಘದಲ್ಲಿ ಸಂಘದ ಅದ್ಯಕ್ಷ ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಪುಷ್ಪರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ವರದಿಗಾರ ಶಿಬಿ ಧರ್ಮಸ್ಥಳ, ಕೊಶಾಧಿಕಾರಿಯಾಗಿ ಪ್ರಜಾವಾವಾಣಿ ಪತ್ರಿಕೆಯ ವರದಿಗಾರ ಗಣೇಶ್ ಶಿರ್ಲಾಲು ಹಾಗೂ ಉಪಾಧ್ಯಕ್ಷರಾಗಿ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸಂತೋಷ್ ಕೋಟ್ಯಾನ್, ಕಾರ್ಯದರ್ಶಿಯಾಗಿ ಪ್ರತಿನಿಧಿ ಪತ್ರಿಕೆಯ ವರದಿಗಾರ ಭುವನೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು