ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ: ₹1ಕೋಟಿ ಅನುದಾನ ಬಿಡುಗಡೆ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಬಗ್ಗೆ ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.

ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

error: Content is protected !!