
ಬೆಳ್ತಂಗಡಿ : ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಒಂಬತ್ತು ಮಂದಿ ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ.
ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.