
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31 ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಾ ಬಂದಿದ್ದು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರದು ಇಬ್ಬರು ವಿದ್ಯಾರ್ಥಿನಿಯರಾದ ಒಂದೇ ಮನೆಯ ಸಹೋದರಿಯರು ಚರಿಷ್ಮಾ(17) ಮತ್ತು ಚದ್ಮಿಕಾ(15) ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣರಾದ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ(17) ನೀಡಿದ ದೂರಿನ ಮೇರೆಗೆ ಕಲಂ 281,125,125(a) ಬಿಎನ್ ಎಸ್ ಅಡಿಯಲ್ಲಿ ಮಾ.31 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು
ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಾದ ಶರಿಷ್ಮಾ ಹಾಗೂ ಚದ್ಮಿಕಾ ಅವರು ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ.