
ಬೆಳ್ತಂಗಡಿ : ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ 2025-26 ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಸಂಸ್ಥೆಯಾದ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು 2025-26ನೇ ಸಾಲಿನ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಏಪ್ರಿಲ್ 15 ಮತ್ತು 16ರಂದು ಕಾಲೇಜಿನ ಕ್ರೀಡಾಂಗಣದಲಿ., ಆಯೋಜಿಸಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೊ. ಅಲೆಕ್ಸ್ ಐವನ್ ಸಿಕ್ತ್ವೆರಾ ಹೇಳಿದರು.
ಅವರು ಎ. 13 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಪುರುಷರಿಗಾಗಿ ‘ಶ್ರೀ ಎಂ.ಕೆ. ಅನಂತರಾಜ್ ಸ್ಮರಣಾರ್ಥ ಟ್ರೋಫಿ’ ಹಾಗೂ ಮಹಿಳೆಯರಿಗಾಗಿ ‘ಫ್ಯಾಬಿಯನ್ ಬಿ.ಎನ್. ಕುಲಾಸೊ ಸ್ಮರಣಾರ್ಥ ರೋಲಿಂಗ್ ಟ್ರೋಫಿ’ಯನ್ನು ಒಳಗೊಂಡ ಈ ಪಂದ್ಯಾಟಕ್ಕೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ.
ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ಸಾಂಘಿಕ ಚಟುವಟಿಕೆ ಮತ್ತು ಸ್ವರ್ಧಾತ್ಮಕ ಮನೋಭಾವವನ್ನು ಉತ್ತೇಜಿಸುವುದು ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ ಎಂದರು.
ಎ. 15 ರಂದು
ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ ಡಾ| ಸ್ಮಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ದೇರಳಕಟ್ಟೆಯ ಕೆ.ಎಸ್. ಹೆಗ್ಡೆ, ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಕರುಣಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ, ಮಂಗಳೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜಾ ಹಾಗೂ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ,
ಎ. 16 ರಂದು ನಡೆಯಲಿರುವ ಸಮಾರೋಪ ಸಮಾರಂಭ ವಂ। ಡಾ| ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಜೋಸೆಫ್ ಎನ್.ಎಂ. ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
1982ರಲ್ಲಿ ಸ್ಥಾಪನೆಯಾದ ಸೇಕ್ರೆಡ್ ಹಾರ್ಟ್ ಕಾಲೇಜು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇತ್ತೀಚೆಗೆ ನಡೆದ 2024-25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದ ಸಮಗ್ರ ಚಾಂಪಿಯನ್ ಶಿಪ್, ತೃತೀಯ ಸ್ಥಾನವನ್ನು ಕಾಲೇಜು ಪಡೆದುಕೊಂಡಿದೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕಾರ್ಯಕ್ರಮದ ಸಂಚಾಲಕ ಡಾ| ಪ್ರಕಾಶ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ| ಈಶ್ವರ ಗೌಡ ಪಿ., ಕನ್ನಡ ವಿಭಾಗದ
ಮುಖ್ಯಸ್ಥೆ ರಾಜೇಶ್ವರಿ ಉಪಸ್ಥಿತರಿದ್ದರು.