ಎಸ್ ಎಸ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟ,ರಿಸಲ್ಟ್ ಹೀಗೆ ನೋಡಿ:

 

 

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಹಾಗು ಪೋಷಕರುಗಳು ಕಾತುರದಿಂದ ನಿರೀಕ್ಷಿಸುತ್ತಿರುವ ಹತ್ತನೇ ತರಗತಿ ಪರೀಕ್ಷೆ – 1 ರ ಫಲಿತಾಂಶ ನಾಳೆ ಗುರುವಾರ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಾರ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶದ ವಿವರಗಳನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಮಾಧ್ಯಮಗೋಷ್ಟಿಯಲ್ಲಿ ಘೋಷಣೆ ಮಾಡಲಿದ್ದಾರೆ.
ವಿದ್ಯಾರ್ಥಿಗಳು ನಾಳೆ ಮಧ್ಯಾಹ್ನ 12 ಗಂಟೆಯ ಬಳಿಕ ಎಸ್ ಎಸ್ ಎಲ್ ಸಿ ಪರೀಕ್ಷೆ – 1 ರ ಫಲಿತಾಂಶವನ್ನು

https://karresults.nic.in

ಲಿಂಕ್ ಮೂಲಕ ಮತ್ತು ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರು ತಿಳಿಸಿದ್ದಾರೆ.

ಡಿಜಿಲಾಕರ್​ನಲ್ಲಿ ಅಂಕಪಟ್ಟಿ:

ದ್ವಿತೀಯ ಪಿಯುಸಿಯಂತೆಯೇ ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಸಹ ಡಿಜಿಲಾಕರ್​ನಲ್ಲಿ ಅಂಕಪಟ್ಟಿಗಳು ಲಭ್ಯವಾಗುವ ವ್ಯವಸ್ಥೆಯನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಡಿದೆ. ವಿದ್ಯಾರ್ಥಿಗಳು

https://digilocker.gov.in

ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ನಾಳೆ ಮಧ್ಯಾಹ್ನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ. ತೃತೀಯ ಭಾಷೆಯ ಕುರಿತು ಹೈಕೋರ್ಟ್ ಆದೇಶ ಪಾಲಿಸುವುದಾಗಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಮಾರ್ಚ್​ 18 ರಿಂದ ನಡೆದಿದ್ದ ಪರೀಕ್ಷೆ:

ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಮಾ.18 ರಿಂದ ಎ.2ರವರೆಗೆ ನಡೆದಿತ್ತು. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ

ನಾಳೆ ಮಧ್ಯಾಹ್ನ 12 ರಿಂದ https://karresults.nic.in/ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯ ಇರಲಿದೆ. ಜೊತೆಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ವಾಟ್ಸಾಪ್​ಗೆ ಮತ್ತು Karnatakaone mobile App ಮೂಲಕ ಫಲಿತಾಂಶ ಸಿಗಲಿದೆ.

error: Content is protected !!