ಚಾರ್ಮಾಡಿ, ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ: ವಿಷಯ ತಿಳಿದು ತಂದೆಯೂ ಆತ್ಮಹತ್ಯೆಗೆ ಯತ್ನ:

 

 

 

ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬುಗೌಡ ಪುತ್ರ ಗಣೇಶ್(20) ಎಂಬಾತ ಎ.25 ರಂದು ಮಧ್ಯಾಹ್ನ 1:30 ಕ್ಕೆ ಮನೆ ಸನೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೆಯಲ್ಲಿ  ದನದ ಕೊಟ್ಟಿಗೆ  ಸ್ವಚ್ಛಗೊಳಿಸುತಿದ್ದ ಗಣೇಶ್  ಏಕಾಏಕಿ ಮನೆಯ ಪಕ್ಕದ ಗುಡ್ಡಕ್ಕೆ ತೆರಳಿ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿದು ಗಣೇಶ್ ತಂದೆ ಬಾಬುಗೌಡ ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಗುಡ್ಡಕ್ಕೆ ಹೋದಾಗ ತಕ್ಷಣ ಸ್ಥಳೀಯರು ರಕ್ಷಣೆ ಮಾಡಿ ಅವರನ್ನು  ಮನೆಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು.‌ಈ ಬಗ್ಗೆ ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!