ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿ, 20 ಕ್ಕಿಂತಲೂ ಅಧಿಕ ಪ್ರಯಾಣಿಕರಿಗೆ ಗಾಯ,

 

 

 

ಬೆಳ್ತಂಗಡಿ:ಚಾರ್ಮಾಡಿ ಘಾಟ್​​ನ ಮೂರನೇ ತಿರುವಿನಲ್ಲಿ ಖಾಸಗಿ ಬಸ್​ ಪಲ್ಟಿಯಾಗಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ.

ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತೆರಳಿದ್ದ ತುಮಕೂರು ಜಿಲ್ಲೆಯ ಪಾವಗಡ ಮೂಲದವರು, ಮರಳಿ ಬರುವಾಗ​ ಚಾಲಕನ ನಿಯಂತ್ರಣ ತಪ್ಪಿ ಬಸ್ ಮಗುಚಿ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಪಾವಗಡದವರು ಎಂದು ತಿಳಿದುಬಂದಿದೆ. ಗಾಯಾಳುಗಳಲ್ಲಿ ಎಂಟು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆ, ಸ್ಥಳೀಯರು ಮತ್ತು ವಾಹನ ಸವಾರರು ರಕ್ಷಣೆಗೆ ಧಾವಿಸಿದ್ದಾರೆ. ಅಲ್ಲದೆ, ಸುಮಾರು 5ರಿಂದ 6 ಆಂಬ್ಯುಲೆನ್ಸ್​​ಗಳು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿವೆ. ಗಾಯಾಳುಗಳನ್ನು ಕಕ್ಕಿಂಜೆಯ ಹಾಗೂ ಬೆಳ್ತಂಗಡಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

error: Content is protected !!