
ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ₹50 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಶಾಸಕ ಹರೀಶ್ ಪೂಂಜ ಸೋಮವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜ “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ಹೇಳಿದರು.