
ಬೆಳ್ತಂಗಡಿ: ಕೆ ಎಸ್ ಆರ್ ಟಿ.ಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದ ಕೆ ಎಸ್ ಆರ್ ಟಿ.ಸಿ ಬಸ್ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕೆಳಗಿನ ಪೆಟ್ರೋಲ್ ಪಂಪ್ ಬಳಿ ಎದುರಿನಿಂದ ಬರುತಿದ್ದ ಮಹಿಳೆ ಚಲಾಯಿಸುತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಹಿಳೆ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದಾರೆ.ಗಾಯಗೊಂಡಿರುವ ಮಹಿಳೆ ಗಾಂಧಿನಗರ ನಿವಾಸಿ ಎಂದು ತಿಳಿದು ಬಂದಿದೆ.