ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು:

 

 

 

ಬೆಳ್ತಂಗಡಿ : ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಗಳ ಪುತ್ರಿ ರಮ (19) ಎಂಬಾಕೆ ಎ.25 ರ ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ರಮ ಎ.29 ರಂದು ಮಧ್ಯರಾತ್ರಿ ಸಾವನ್ನಪ್ಪಿದ್ದಾಳೆ.

ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದ ರಮ ಯುವಕನೊಬ್ಬನನ್ನು ಪ್ರೀತಿಸುತಿದ್ದಳು. ಈ ವಿಚಾರ ಎರಡು ಮನೆಯವರಿಗೂ ತಿಳಿದು ಒಪ್ಪಿಗೆ ಸೂಚಿಸಿದ್ದರು. ಕಾಲೇಜ್ ಮುಗಿದ ಒಂದು ವರ್ಷದ ಬಳಿಕ ಮದುವೆ ಮಾಡಿಕೊಡುವುದಾಗಿ ರಮ ತಂದೆ ತಿಳಿಸಿದ್ದರೂ ತಂದೆ ಮದುವೆ ಮಾಡದಿದ್ದರೆ ಎಂಬ ಭಯದಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

error: Content is protected !!