ಲಾಯಿಲ, ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ :

 

 

ಬೆಳ್ತಂಗಡಿ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 5 ರಂದು ಪತ್ತೆಯಾಗಿದೆ. ಲಾಯಿಲ ಗ್ರಾಮದ ಸವಣಾಲು ರಸ್ತೆಯ ಕರ್ನೊಡಿ ನಿಡ್ಯಾರ ಎಂಬಲ್ಲಿ ಸ್ಥಳೀಯರೊಬ್ಬರಿಗೆ ದುರ್ವಾಸನೆ ಬಂದಿದ್ದು, ಸಮೀಪದ  ಗುಡ್ಡ ಕ್ಕೆ ಹೋಗಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಮರವೊಂದರಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಂದಾಜು ಸುಮಾರು 45 ರಿಂದ 50 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದು ಶವ ಸಂಪೂರ್ಣ ಕೊಳೆತಿದ್ದು ಸುಮಾರು ಒಂದು ವಾರಗಳ ಹಿಂದೆ ಘಟನೆ ನಡೆದಿರಬಹುದು ಎಂದು ಸಂಶಯಿಸಲಾಗಿದೆ.

error: Content is protected !!