ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ಬೆಳ್ತಂಗಡಿಗೆ ಮೊದಲ ಭೇಟಿ: ಉಪರಾಷ್ಟ್ರಪತಿ ಕಾರ್ಯಕ್ರಮ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಭೆ:

 

 

 

 

ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಟನ್ ಅವರು ಬೆಳ್ತಂಗಡಿಗೆ ಭೇಟಿ ನೀಡಲಿದ್ದು. ಈ ಹಿನ್ನಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಮೇ.26ರಂದು ವಿವಿಧ ಇಲಾಖಾಧಿಕಾರಿಗಳ ಸಭೆ ನಡೆಯಿತು.

ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಉಪರಾಷ್ಟ್ರಪತಿಗಳ ಭೇಟಿಯ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಸೂಚನೆ ಹಾಗೂ ಸಲಹೆಗಳನ್ನು ನೀಡಲಾಗಿದೆ. ಎಲ್ಲಾ ಜಿಲ್ಲೆಯಲ್ಲಿ ಮೂಡದ ಸಮಸ್ಯೆ ಇದೆ. ಬೆಳ್ತಂಗಡಿ ತಾಲೂಕಿನ ಮೂಡದ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಮಾಡಿದ್ದಾರೆ. ಹೊಸ ನೇಮಕಾತಿ ಆಗುವ ತನಕ ಸ್ವಲ್ಪ ಸಮಸ್ಯೆ ಇದೆ ಎಂದರು. ಸ್ವ ಇಚ್ಛೆಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಒಳಗಿರುವ ಕುಟುಂಬದಿಂದ ಸ್ಥಳಾಂತರಗೊಳ್ಳಲು ಮುಂದೆ ಬರುತ್ತಾರೆ ಅವರಿಗೆ ಪರಿಹಾರ ನೀಡಲಾಗಿದೆ ಹೊರತು ಯಾರನ್ನೂ ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ ಈ ಬಗ್ಗೆ ಗೊಂದಲ ಬೇಡ ಎಂದರು. ಪಡಿತರ ಚೀಟಿ ಸಂಬಂಧಿಸಿದಂತೆ ಏನಾದರೂ ಸಮಸ್ಯೆ ಇದ್ದರೆ ಪರಿಶೀಲನೆ ಮಾಡುತ್ತೇವೆ ಎಂದರು.

ಜಿಲ್ಲಾದಿಕಾರಿ ದರ್ಶನ್ ಹೆಚ್‌ವಿ ಮತ್ತು ಪೊಲೀಸ್ ಆಯುಕ್ತ ಅರುಣ್ ಕುಮಾರ್ ಅವರು ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳ್ತಂಗಡಿಗೆ ಮೊದಲ ಭೇಟಿ…
ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬೆಳ್ತಂಗಡಿ ತಾಲೂಕಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ಈ ಹಿಂದೆ ಕುತ್ಲೂರಿಗೆ ಬಂದಿದ್ದೆ. ಮುಂದೆ ಮಳೆಗಾಲದ ಪೂರ್ವಭಾವಿ ಸಭೆ ನಡೆಸಲಾಗುವುದು. ಹಾಗೆಯೆ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

error: Content is protected !!