ದೆಹಲಿಯಲ್ಲಿ ಭಾರೀ ಅಗ್ನಿ ಅನಾಹುತ, ವಿದೇಶಿ ಪ್ರಜೆಗಳು ಸೇರಿದಂತೆ 21, ಜನ ಸಾವು:

 

 

 

ದೆಹಲಿ: ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ರೆಸ್ಟೋರೆಂಟ್​​ವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ವಿದೇಶಿ ಪ್ರಜೆಗಳು ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ದೆಹಲಿ ದಕ್ಷಿಣ ವಿಭಾಗದ ಡಿಸಿಪಿ ಅನಂತ್ ಮಿತ್ತಲ್ ಅವರು ಪ್ರತಿಕ್ರಿಯಿಸಿ, “ಬೆಳಿಗ್ಗೆ 8:48ಕ್ಕೆ ಮಾಲ್ವಿಯಾ ನಗರದ ಫ್ಲೋರಿಶ್ ಸ್ಟೇ ಬಿ&ಬಿಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಬಂತು. ಸ್ಥಳೀಯ ಪೊಲೀಸರು ತಕ್ಷಣವೇ ಸ್ಥಳ ತಲುಪಿ ರಕ್ಷಣಾ, ಸ್ಥಳಾಂತರ ಪ್ರಕ್ರಿಯೆ ಮತ್ತು ಪರಿಹಾರ ಕಾರ್ಯಾಚರಣೆ ಶುರು ಮಾಡಿದರು. 8 ಅಗ್ನಿಶಾಮಕ ದಳದವರ ಸಹಾಯದಿಂದ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಯಿತು. ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ಇತರ ತುರ್ತು ಪ್ರತಿಕ್ರಿಯೆ ತಂಡಗಳ ಸಂಘಟಿತ ಪ್ರಯತ್ನಗಳಿಂದ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಈ ದುರಂತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ಎಲ್ಲಾ ಸಂಬಂಧಿತ ಸಂಸ್ಥೆಗಳು ಸ್ಥಳದಲ್ಲಿ ಒದಗಿಸುತ್ತಿವೆ” ಎಂದು ತಿಳಿಸಿದರು.

error: Content is protected !!