ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯಭಾರ: ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ ಕೆ ಶಿ.:

 

 

 

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಸಂಜೆ ನಿಗದಿತ ಸಮಯ 4:05 ಗಂಟೆಗೆ ನಡೆದ ಅದ್ಧೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿಕೆಶಿಗೆ ಪ್ರಮಾಣವಚನ ಬೋಧಿಸಿದರು.

ಗಂಗಾಧರಯ್ಯ ಅಜ್ಜನವರ ಹೆಸರಿನಲ್ಲಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಅದಕ್ಕೂ ಮುನ್ನ ಅಜ್ಜನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

error: Content is protected !!