ಬಾಲಕ ಸುಮಂತ್ ಕೊಲೆ ಪ್ರಕರಣ, 5 ತಿಂಗಳಾದರೂ ಪತ್ತೆಯಾಗದ ಸುಳಿವು: ಶಾಸಕ ಹರೀಶ್ ಪೂಂಜ ಬೇಸರ, ಮತ್ತೆ ಪೋಷಕರೊಂದಿಗೆ ಎಸ್.ಪಿ‌.ಭೇಟಿ:

 

 

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಕೊಲೆಯಾಗಿ 5 ತಿಂಗಳಾಗುತ್ತ ಬರುತಿದ್ದು, ಅದರೆ ಕೊಲೆಗೈದವರ ಸುಳಿವು ಇನ್ನೂ ಪತ್ತೆಯಾಗದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸುಮಂತ್ ಕುಟಂಬದವರೊಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ತನಿಖೆಯ ಪ್ರಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಈ ಹಿಂದೆ ವಿಧಾನಮಂಡಲ ಅಧಿವೇಶನದಲ್ಲಿಯೇ ವಿಷಯವನ್ನು ಪ್ರಸ್ತಾಪಿಸಿದ್ದೆ.

ಅಲ್ಲದೇ, ಈ ಪ್ರಕರಣದ ಬಗ್ಗೆ ಮಾನ್ಯ ಗೃಹಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದೆ. ಆದಾಗ್ಯೂ, ಇಷ್ಟೊಂದು ಸಮಯ ಕಳೆದರೂ ಕುಟುಂಬಕ್ಕೆ ನ್ಯಾಯ ದೊರಕದಿರುವುದು ನೋವಿನ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕ ಸುಮಂತ್ ಅವರ ಪೋಷಕರೊಂದಿಗೆ ಹಾಗೂ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ಪ್ರಕರಣದ ಪ್ರಗತಿ ಹಾಗೂ ಇದುವರೆಗಿನ ತನಿಖೆಯ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಆಯಾಮಗಳಲ್ಲೂ ನಿಷ್ಪಕ್ಷಪಾತ ಹಾಗೂ ಸಮಗ್ರ ರೀತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಕೋರಲಾಯಿತು.

ನಿರಪರಾಧಿ ಬಾಲಕನ ಸಾವಿನ ಪ್ರಕರಣದಲ್ಲಿ ಸತ್ಯ ಹೊರಬಂದು ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ನಮ್ಮ ಪ್ರಯತ್ನ ಕುಟುಂಬಸ್ಥರೊಂದಿಗೆ ನಿರಂತರವಾಗಿರಲಿದೆ.ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ

error: Content is protected !!