ಜೂ14 ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡದ ಶಿಲಾನ್ಯಾಸ: ನ್ಯಾಯಮೂರ್ತಿಗಳು, ಸಚಿವರು, ಇತರ ಗಣ್ಯರು ಭಾಗಿ:

 

 

ಬೆಳ್ತಂಗಡಿ: ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00 ಕೋಟಿ ರೂಪಾಯಿಗಳ ಬೇಡಿಕೆಯನ್ನು ಈಗಾಗಲೇ ಸಲ್ಲಿಸಿದ್ದು, ಮೊದಲ ಹಂತದಲ್ಲಿ 9.00 ಕೋಟಿ ಬಿಡುಗಡೆಗೊಂಡಿದ್ದು ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸವು ಜೂ.14 ರಂದು ಪೂರ್ವಾಹ್ನ 11 ಗಂಟೆಗೆ ನೆರವೇರಲಿರುವುದು ಎಂದು ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಹೇಳಿದರು.

ಅವರು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ನೂತನ ನ್ಯಾಯಾಲಯ ಕಟ್ಟಡದ ಶಿಲಾನ್ಯಾಸವನ್ನು ಹೈ ಕೋರ್ಟ್ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರ ಉಪಸ್ಥಿತಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಆಡಳಿತತ್ಮಾಕ ನ್ಯಾಯಾಧೀಶರಾದ ಎಚ್.ಟಿ. ನರೇಂದ್ರ ಪ್ರಸಾದ್‌ರವರು ನಡೆಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಆರೋಗ್ಯ ಸಚಿವ ಯು.ಟಿ ಖಾದರ್, ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ. ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ.ಕೆ, ತ್ಯಾಗರಾಜ್ ಎನ್. ಇನವಳ್ಳಿ, ಮುರಳೀಧರ ಪೈ, ಸಂಸದರಾದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರುಗಳಾದ ಐವನ್ ಡಿ ಸೋಜ ಮತ್ತು ಪ್ರತಾಪಸಿಂಹ ನಾಯಕ್ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್‌ನ ಸದಸ್ಯ ಪಿ.ಪಿ ಹೆಗ್ಡೆ ಭಾಗವಹಿಸಲಿದ್ದಾರೆ.

ಸುಮಾರು 60 ವರ್ಷ ಹಳೆಯದಾದ ಹಳೆಯ ನ್ಯಾಯಾಲಯದ ಕಟ್ಟಡ ಸೋರುತ್ತಿದ್ದು. ನಾದುರಸ್ತಿಗೆ ತಲುಪಿರುತ್ತದೆ. ನೂತನ ನ್ಯಾಯಾಲಯ ಕಟ್ಟಡ ಆಗಬೇಕು ಎಂಬುದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದ ನಾವು ಸರಕಾರದ ಮಟ್ಟದಲ್ಲಿ ಸತತ ಪ್ರಯತ್ನವನ್ನು ನಡೆಸಿದೆವು. ಅದರ ಫಲವಾಗಿ ರಾಜ್ಯ ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ್ದು ವಕೀಲರ ಸಂಘದ ಪರವಾಗಿ ಸರಕಾರಕ್ಕೆ ಹೃತೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇವೆ. ನೂತನ ನ್ಯಾಯಾಲಯದ ಕಟ್ಟಡದ ಕಾಮಗಾರಿಯು ಕುಬೇರ ಕನ್‌ಸ್ಯಕ್ಷ ನ್ ಮಂಗಳೂರು ಇವರಿಗೆ ಟೆಂಡರ್ ಆಗಿದ್ದು, ಮಂಜೂರಾತಿಗಾಗಿ ನಮಗೆ ವಿಶೇಷ ಸಹಕಾರ ನೀಡಿದ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ ಮತ್ತು ವಿಧಾನ ಪರಿಷತ್ ಶಾಸಕರುಗಳಾದ ಐವನ್ ಡಿ ಸೋಜ ಮತ್ತು ಪ್ರತಾಪ ಸಿಂಹ ನಾಯಕ್ ರವರಿಗೆ ಸಂಘದ ಪರವಾಗಿ ಅಭಿಂದನೆಗಳನ್ನು ಹಾಗೂ ಧನ್ಯವಾದವನ್ನು ಸಲ್ಲಿಸುತ್ತಿದ್ದೇನೆ ಎಂದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಧೀಶರುಗಳು, ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಯಶಸ್ವಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜು ಹಾಗೂ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ, ಕಾರ್ಯದರ್ಶಿಯಾದ ಪ್ರಶಾಂತ್ ಎಂ. ದಕ್ಷಿಣ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರು ಗೋಕುಲ್ ದಾಸ್, ದಕ್ಷಿಣ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಮಂಗಳೂರು ಕಾರ್ಯನಿರ್ವಾಹಕರಾದ ಅಭಿಯಂತರರು ರಾಘವೇಂದ್ರ ನಾಯ್ಕ ಹಾಗೂ ಸಂಘದ ಪದಾಧಿಕಾರಿ, ಸದಸ್ಯರು ಶ್ರಮಿಸುತ್ತಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಿ ತಮ್ಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್ ಎಸ್.ಎಂ., ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ, ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಉಪಸ್ಥಿತರಿದ್ದರು. ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಎಂ. ಸ್ವಾಗತಿಸಿದರು.

error: Content is protected !!