
ಬೆಳ್ತಂಗಡಿ; ದ್ವಿಚಕ್ರ ಹಾಗೂ ಪಿಕಪ್ ವಾಹನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಬಳ್ಳಮಂಜ ಪಣಕಜೆ ರಸ್ತೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನವು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ದ್ವಿಚಕ್ರ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮಡಂತ್ಯಾರಿನ ‘ಎಸ್.ಎಂ ಶಾಮಿಯಾನ’ ಸಂಸ್ಥೆಗೆ ಸೇರಿದ ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಪಾಲ್ಯರ ಬಳಿ ಪಿಕಪ್ ವಾಹನವು ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿಚಕ್ರದಲ್ಲಿದ್ದ ಸಹ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಸವಾರ ಡಾಕಯ್ಯ ಗೌಡ ಅವರಿಗೂ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.