
ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಉರುಳಿ ಬಿದ್ದ ಘಟನೆ ಮಂಗಳವಾರ ನಡೆದಿದೆ.ಕಾರಿನಲ್ಲಿ ಮೂವರು ಸಂಚರಿಸುತ್ತಿದ್ದ ವೇಳೆ ಕಾಶಿಬೆಟ್ಟು ಪ್ರಗತಿನಗರ ತಿರುವು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಕಾರು ಉರುಳಿ ಬಿದ್ದಿದೆ.ತ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಇವರನ್ನು ಸ್ಥಳೀಯರ ಸಹಕಾರದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.