
ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 25 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವರ್ಗಾವಣೆಯಾಗದೇ ಬೀಡುಬಿಟ್ಟಿದ್ದ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು. ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ.11 ರಂದು BNS-2023(u/s-75(3),79,351(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಚಂದ್ರಶೇಖರ್ ವಿರುದ್ಧ ಆಸ್ಪತ್ರೆಯಲ್ಲಿ ಮೆಡಿಕಲ್ ಸಾಮಾಗ್ರಿಗಳನ್ನು ಖಾಸಗಿ ಮೆಡಿಕಲ್ ಗಳಿಗೆ ಸಾಗಿಸುತ್ತಿರುವ ಆರೋಪಗಳು ಈ ಹಿಂದಿನಿಂದ ಕೇಳಿಬರುತ್ತಿತ್ತು. ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಇಲಾಖೆ ತಗೊಂಡಿಲ್ಲ ಇದಕ್ಕೆ ಕಾರಣ ಇಲಾಖೆಯ ಮೇಲಾಧಿಕಾರಿಗಳ ಬೆಂಬಲ ಚಂದ್ರಶೇಖರ್ ಅವರಿಗೆ ಇದೆ ಎನ್ನಲಾಗಿದೆ. ಅದಲ್ಲದೆ ಹಲವರು ಯುವತಿಯರಿಗೆ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪಗಳು ಕೂಡ ಕೇಳಿ ಬಂದಿದೆ. ಆದರೆ ಭಯದಿಂದ ಮಾರ್ಯಾದೆಗೆ ಅಂಜಿ ಯಾರು ದೂರು ಕೊಡಲು ಮುಂದೆ ಬಂದಿರಲಿಲ್ಲ. ಇದೀಗ ಆಸ್ಪತ್ರೆಯ ಸಿಬ್ಬಂದಿ ಧೈರ್ಯದಿಂದ ಲೈಂಗಿಕ ಕಿರುಕುಳವನ್ನು ಮನೆಯವರಿಗೆ ತಿಳಿಸಿ ದೂರು ಕೊಟ್ಟಿದ್ದಾರೆ.