
ಬೆಳ್ತಂಗಡಿ: ಕಾರುಗಳ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಇನ್ನಿತರರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಎಂಬಲ್ಲಿ ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಬಿದ್ದು ಗಂಭೀರ ಗಾಯಗೊಂಡಿದ್ದು,ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ .ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ನಚ್ಚುಗುಚ್ಚುಗೊಂಡಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.