
ಬೆಳ್ತಂಗಡಿ : : ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್ 107 ರ ಮನೆಮನೆಗೆ ಕೊಡೆಗಳ ವಿತರಣೆ ನಡೆಯಿತು.
ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್(ರಿ) ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷರಾದ ದೀಪಕ್ ಜಿ, ಕಿರಣ್, ಸಂತೋಷ್. ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.