
ಪುತ್ತೂರು: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟರು.ಕೆಲಸದ ನಿಮಿತ್ತ ತಾಲೂಕು ಕಚೇರಿಗೆ ಆಗಮಿಸಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಸಮೀಪದ ಮಠಂತಬೆಟ್ಟು ನಿವಾಸಿಯಾಗಿದ್ದ ನಿರಂಜನ ರೈ ಅವರು ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ, ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.