ಧರ್ಮಸ್ಥಳ ಪ್ರಕರಣ, ಸೊತ್ತುಗಳ ಸಹಿತ, ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸಿದ ಎಸ್ಐಟಿ:

 

 

 

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ(ಎಸ್​ಐಟಿ)ವು ವಶಪಡಿಸಿಕೊಂಡಿದ್ದ ಸೊತ್ತುಗಳ ಸಹಿತ ಅಂತಿಮ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಬುಧವಾರ ಮಧ್ಯಾಹ್ನ ಸಲ್ಲಿಸಿದೆ.

ಎಸ್ಐಟಿ ಅಧಿಕಾರಿಗಳು ಮಧ್ಯಾಹ್ನದ ವೇಳೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಆಗಮಿಸಿದರು. ಅಧಿಕಾರಿಗಳು ಒಂದು ವರ್ಷದ ಬಳಿಕ ಒಟ್ಟು 12 ಕಡತಗಳನ್ನು ಒಳಗೊಂಡಿರುವ 7 ಸಾವಿರಕ್ಕೂ ಅಧಿಕ ಪುಟಗಳ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯೊಂದಿಗೆ ವಿಡಿಯೋ ಹೇಳಿಕೆ ರೆಕಾರ್ಡ್​​ ಮಾಡಿದ ಹಾರ್ಡ್​ಡಿಸ್ಕ್​​ ಅನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತನಿಖೆಯ ಸಂದರ್ಭದಲ್ಲಿ ಒಟ್ಟು 255 ಸಾಕ್ಷಿಗಳ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ. ಅಲ್ಲದೆ, ಮಾನವನ ಬುರುಡೆ, ಅಸ್ಥಿಪಂಜರ, ಮೊಬೈಲ್ ಫೋನ್‌ಗಳು, ದಾಖಲೆಗಳು ಸೇರಿದಂತೆ ಎಫ್ಎಸ್​ಎಲ್​​ಗೆ ಹೋಗಿ ಬಂದ ಎಲ್ಲಾ ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

ಚಿನ್ನಯ್ಯನ ವಿಚಾರಣೆ ಮುಂದೂಡಿಕೆ: ಪ್ರಕರಣದ ದೂರುದಾರ ಚಿನ್ನಯ್ಯ ಕೂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿಯೊಂದಿಗೆ ಆಗಮಿಸಿದ್ದು. ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ಚಿನ್ನಯ್ಯನ ವಿಚಾರಣೆ ಇತ್ತು‌‌. ನ್ಯಾಯಾಲಯವು ಆಗಸ್ಟ್ 29ಕ್ಕೆ ಚಿನ್ನಯ್ಯನ ವಿಚಾರಣೆಯನ್ನು ಮುಂದೂಡಿದೆ.

error: Content is protected !!