ಪ್ರೀತಿಯ ಹುಚ್ಚಿಗೆ ಅಮಾಯಕ ಯುವತಿಯ ಬರ್ಬರ ಹತ್ಯೆ :ಕೊಲೆ ಆರೋಪಿ ಬೆಳ್ತಂಗಡಿಯ ಚೇತನ್ ಗಾಗಿ ಪೊಲೀಸರ ಹುಡುಕಾಟ:

 

 

ಬಂಟ್ವಾಳ: ಬಿ. ಸಿ. ರೋಡ್ ಕೆಎಸ್ ಆರ್ ಟಿ ದಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಯುವಕ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಕೊಲೆಗೈದ ಯುವಕನ ಮಾಹಿತಿಯನ್ನು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಪೊಲೀಸ್ ಮಾಹಿತಿ ಪ್ರಕಾರ ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡ ಮಗ ಚೇತನ್ ಗೌಡ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಈತ ಕೊಲೆಯಾದ ಯುವತಿಯ ದೂರದ ಸಂಬಂಧಿಯಾಗಿದ್ದು ಹಾಗೂ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಮಾಹಿತಿ ಲಭಿಸಿದೆ.
ಬಂಟ್ಬಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(25) ಸಾವನ್ನಪ್ಪಿದವಳು. ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

error: Content is protected !!