
ಬೆಳ್ತಂಗಡಿ: ಬಿ ಸಿ. ರೋಡ್ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಡೆದ ಕಕ್ಯೆಪದವಿನ ಯುವತಿಯ ಹತ್ಯೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಖಂಡಿಸಿದ್ದಾರೆ. ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳ ಬೇಕು ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖದೊಂದಿಗೆ ನಾನು ಇದ್ದೇನೆ ಎಂದು ಶಾಸಕ ಹರೀಶ್ ಪೂಂಜಾ ತಿಳಿಸಿದ್ದಾರೆ