
ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಯೋಜನೆ ಪರಿಶೀಲನೆ ಯು ನಡೆಯುತಿದ್ದು ,ಜನರ ಹೆಚ್ಚಿನ ಅನುಕೂಲಕ್ಕಾಗಿ ಗ್ರಾಮ ಪಂಚಾಯತ್ ನ ವಿವಿಧ ವಾರ್ಡಿನಲ್ಲಿ ಆಯೋಜಿಸಲು ಪಂಚಾಯತ್ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಯಾರ ಶೇಖರ್ ಲಾಯಿಲ ಆಗ್ರಹಿಸಿದರು.ಅವರು ಜು 22 ರಂದು ನಡೆದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ವಿಶೇಷ ಗ್ರಾಮ ಸಭೆಯಲ್ಲಿ ಈ ಬಗ್ಗೆ ಮಾತನಾಡಿ ಈಗಾಗಲೇ ಸರ್ಕಾರ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಖುದ್ದಾಗಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂಬ ಸರ್ಕಾರದ ಆದೇಶ ಇದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ನೆಟ್ ವರ್ಕ್ ಸೇರಿದಂತೆ ಇನ್ನಿತರ ತಾಂತ್ರಿಕ ಸಮಸ್ಯೆಗಳಿಂದ ಸಮಸ್ಯೆಗಳಾಗುತಿದ್ದು, ಈಗಾಗಲೇ ಮೆಸ್ಕಾಂ ಇಲಾಖೆಯಲ್ಲಿ ಜನರು ಕ್ಯೂ ನಿಲ್ಲುತಿದ್ದು ಇದರಿಂದಾಗಿ ಜನ ಸಾಮಾನ್ಯರಿಗೆ ತೊಂದರೆಯಾಗುತಿದ್ದು, ಈ ನಿಟ್ಟಿನಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ಮೆಸ್ಕಾಂ ಇಲಾಖೆಯ ಸಹಕಾರದಲ್ಲಿ ಪಂಚಾಯತ್ ನ ವಾರ್ಡ್ ಮಟ್ಟದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನ ಮಾಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು. ಈ ವೇಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.