ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ: ಜು 25 ಲಾಯಿಲದಲ್ಲಿ ಬೃಹತ್ ರಕ್ತದಾನ ಶಿಬಿರ

 

 

 

ಬೆಳ್ತಂಗಡಿ: ವಿವೇಕ ಜಾಗ್ರತ ಬಳಗ ಬೆಳ್ತಂಗಡಿ,ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಸದ್ಗತಿ ದಿನದ ಪ್ರಯುಕ್ತ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಜುಲೈ 25 ಶನಿವಾರ ಲಾಯಿಲ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಲಿದೆ. ಶಿಬಿರವನ್ನು ಲಾಯಿಲ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ ಅಧ್ಯಕ್ಷ ಚಿದಾನಂದ ಗೌಡ ವಹಿಸಿಕೊಳ್ಳಲಿದ್ದಾರೆ.ಶಿಬಿರದ ಮಾಹಿತಿಯನ್ನು ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು ವೈದ್ಯಾಧಿಕಾರಿ ರಾಮಚಂದ್ರ ಭಟ್ ನೀಡಲಿದ್ದಾರೆ. ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

error: Content is protected !!