
ಬೆಳ್ತಂಗಡಿ:ಸುಮಾರು 26 ಕ್ಕಿಂತಲೂ ಅಧಿಕ ಬಾರಿ ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಹಲವಾರೂ ಜೀವಗಳನ್ನು ಉಳಿಸುವ ಮಹತ್ಕಾರ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ಸುರೇಶ್ ಬೈರ

ಅವರ ಮಾನವೀಯ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಹಾಗೂ ಸಮಾಜದಲ್ಲಿ ರಕ್ತದಾನದ ಮಹತ್ವವನ್ನು ಪ್ರೋತ್ಸಾಹಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆಯ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.