ಉಜಿರೆ: ಬೈಕ್–ಸರಕಾರಿ ಬಸ್ ಭೀಕರ ಅಪಘಾತ; ಸವಾರ ಮೃತ್ಯು, ಸಹಸವಾರ ಗಂಭೀರ

 

 

ಬೆಳ್ತಂಗಡಿ: ನೀರಚಿಲುಮೆ ಬಳಿ ಬೈಕ್ ಮತ್ತು ಸರಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಸನತ್ (30) ಎಂದು ಗುರುತಿಸಲಾಗಿದೆ. ಸಹಸವಾರ ಭರತ್ ಬಳ್ಳಮಂಜ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀರಚಿಲುಮೆ ಬಸ್ ನಿಲ್ದಾಣದ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಧರ್ಮಸ್ಥಳ–ಉಜಿರೆ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!